ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರದು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಇಗಾಳಿಯ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖಎ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ. 17 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು ಹಾಗೂ ಬೆಂಗಳೂರು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ ಎಂದಿದೆ.ಒಟ್ಟಾರೆಯಾಗಿ ಇನ್ನೂ ಐದು ದಿನ ರಾಜ್ಯಾಧ್ಯಂತ ಭಾರಿ ಮಳೆಯಗಾಲಿದೆ. ಬೆಂಗಳೂರು ನಗರದಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯದ ಅನೇಕ ಕಡೆಯಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಗೊಂಡಿತ್ತು. ಬೆಂಗಳೂರಿನಲ್ಲಿ ಇಬ್ಬರು ಸೇರಿದಂತೆ ರಾಜ್ಯಾಧ್ಯಂತ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಈವರೆಗೆ 52 ಮಂದಿ ಸಾವನ್ನಪ್ಪಿದ್ದಾರೆ.
