ಉದಯವಾಹಿನಿ,ಕೋಲಾರ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಾಪಸ್ಸು ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಪತ್ರಿಕಾ ಹೇಳಿಕೆಯ ಮೂಲಕ ಆಗ್ರಹಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಸಾಕಷ್ಟು ಅವ್ಯವಹಾರಗಳಲ್ಲಿ, ಭ್ರಷ್ಟಾಚಾರಗಳಲ್ಲಿ ತೊಡಗಿಕೊಂಡಿರುವ ಪ್ರಧಾನಿ, ಗೃಹ ಸಚಿವರಾದಿಯಾಗಿ ಬಿಜೆಪಿಯ ಅನೇಕ ಕಡು ಭ್ರಷ್ಟರು ಅಧಿಕಾರದಲ್ಲಿ ಮುಂದುವರೆಯುತ್ತಿದ್ದಾರೆ. ಯಾರ ಮೇಲೂ ಸಹ ಕಾನೂನು ಕ್ರಮಗಳು ಆಗುತ್ತಿಲ್ಲ. ಆದರೆ ವಿರೋಧ ಪಕ್ಷಗಳನ್ನೇ ಗುರಿಯಾಗಿಸಿಕೊಂಡು ನಡೆಸುತ್ತಿರುವ ಈ ರೀತಿಯ ಕೃತ್ಯಗಳು ಸಂಪೂರ್ಣ ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ” ಎಂದು ಕಟುವಾಗಿ ಟೀಕಿಸಿದ್ದಾರೆ.
“ದೇಶದಲ್ಲಿ ವಿರೋಧ ಪಕ್ಷಗಳೇ ಇರಬಾರದೆಂಬ ಧೋರಣೆಯನ್ನು ಬಿಜೆಪಿ ಅನುಸರಿಸುತ್ತಿದೆ. ಇವರ ಧೋರಣೆಯಿಂದಾಗಿ ರಾಜ್ಯಪಾಲರ ಭವನ ಇಂದು ಗುಲಾಮಗಿರಿಗೆ ತಳ್ಳಲ್ಪಟ್ಟಿದೆ. ಈ ರೀತಿಯ ಗುಲಾಮಿ ಪ್ರವೃತ್ತಿಯ ರಾಜ್ಯಪಾಲರುಗಳು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು. ಕೂಡಲೇ ರಾಜ್ಯಪಾಲರು ರಾಜೀನಾಮೆ ಕೊಟ್ಟು ತೊಲಗಬೇಕು ” ಎಂದು ಆಗ್ರಹಿಸಿದ್ದಾರೆ.
