ಉದಯವಾಹಿನಿ, ಹಗರಿಬೊಮ್ಮನಹಳ್ಳಿ : ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮದ ಗ್ರಂಥಾಲಯ ಅರಿವು ಕೇಂದ್ರದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಅಡಿಯಲ್ಲಿ ಪ್ರಮುಖ ಬೀದಿಯಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ತರಬೇತಿ ಹಾಗೂ ಗ್ರಂಥಾಲಯದಲ್ಲಿ ಲಭ್ಯವಿರುವ ಸಾಧನಗಳ ಕುರಿತು ಜನರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.
ಈ ವೇಳೆ ಗ್ರಾಮ ಡಿಜಿ ವಿಕಸನದ ಜಿಲ್ಲಾ ಸಂಯೋಜಕರಾದ ಬಿ. ಎ.ಬಸವರಾಜ ಅವರ ನೇತೃತ್ವದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಮುಖ್ಯೋಪಾಧ್ಯಾಯಿನಿ ಕೌಶಲ್ಯ, ಶಿಕ್ಷಕಿ ರುದ್ರಮ್ಮ, ಶಿಕ್ಷಕ ಜಿ ಪ್ರದೀಪ್ ಕುಮಾರ್ ಗ್ರಂಥಾಲಯ ಕಮ್ ಮಾಹಿತಿ ಸಹಾಯಕರಾದ ಟಿ. ಪಾಂಡುರಂಗಪ್ಪ ಇತರರು ಪ್ರಮುಖ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮ ನೆರವೇರಿಸಿದರು.

 

Leave a Reply

Your email address will not be published. Required fields are marked *

error: Content is protected !!