ಉದಯವಾಹಿನಿ, ಉಡುಪಿ : ಪಾಪಿ ಪತಿಯೋರ್ವ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ.
ಜಯಶ್ರೀ (28) ಎಂಬ ಮಹಿಳೆಯನ್ನು ಪತಿ ಕಿರಣ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪತ್ನಿ ಜಯಶ್ರೀ ಹೆಚ್ಚಾಗಿ ರೀಲ್ಸ್ ಮಾಡುತ್ತಿದ್ದು, ಈ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ.
ಇಬ್ಬರ ನಡುವಿನ ಜಗಳದಲ್ಲಿ ರೊಚ್ಚಿಗೆದ್ದ ಗಂಡ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಕಿರಣ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
