ಉದಯವಾಹಿನಿ,ಬೆಂಗಳೂರು, : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳ ಮೂಲಕ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಬಳಿಕ ಹೆಚ್ಚು ಸಕ್ರಿಯರಾಗಿದ್ದು, ಬುಧವಾರ ಶಾಸಕಾಂಗ ನಾಯಕರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.ಈಗಾಗಲೇ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯ ಮೇಲೆ ಕಣ್ಣೀಟ್ಟಿದ್ದು, ಅತೀ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ.ಈಗಾಗಲೇ ಸೋಲಿನ ಹತಾಶೆಯಲ್ಲಿರುವ ಬಿಜೆಪಿ ನಾಯಕರು ಸಹ 2024 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.ಇನ್ನೂ ಮೈಯೆಲ್ಲಾ ಕಣ್ಣಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಶಾಸಕಾಂಗ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲಲೇಬೇಕು. ವಿಧಾನಸಭೆ ಚುನಾವಣೆ ಗೆದ್ದೆವು ಎಂದು ಸುಮ್ಮನೆ ಕೂರುವಂತಿಲ್ಲ.ಲೋಕಸಭೆ ಚುನಾವಣೆಯಲ್ಲೂ ಈ ಗೆಲುವಿನ ಯಾನ ಮುಂದುವರೆಯಬೇಕು, ಹೀಗಾಗಿ ಪಕ್ಷ ಸಂಘಟನೆಯತ್ತ ಕೆಲಸ ಮಾಡಿ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
