ಉದಯವಾಹಿನಿ, ಬೆಂಗಳೂರು: ದೇಶದ್ಯಾಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದ ಆರ್‌ಜಿಕರ್ ಅಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ
ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್ನಲ್ಲಿ ಮತ್ತುಭರಿಸುವ ಔಷಧ ಬೆರೆಸಿ ಅತ್ಯಾಚಾರ ಎಸಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದಾನೆ. ಅರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊರ್ವ ಆರೋಪಿಗೆ ಬಲೆ ಬೀಸಲಾಗಿದೆ.
ಕೃತ್ಯಕ್ಕೆ ಬಳಸಿದ ವಾಹನವನ್ನು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯುವತಿಗೆ ಯಾವುದೇ ರೀತಿಯ ಪ್ರಾಣಾಪಾಯ ಇಲ್ಲ ಎಂದು ತಿಳಿದುಬಂದಿದೆ. ಆಘಾತಕ್ಕೆ ಒಳಗಾಗಿರುವ ಯುವತಿ ನಿಧನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
