ಉದಯವಾಹಿನಿ, ರಾಯ್‌ಪುರ: ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮಾವೋವಾದಿ ಪೀಡಿತ ಏಳು ರಾಜ್ಯಗಳಲ್ಲಿನ ರೆಡ್ ಕಾರಿಡಾರ್ ಪ್ರದೇಶದ ಅಭಿವೃದ್ಧಿ ಕಾರ್ಯಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಾಹ್ನ ಮಹತ್ವದ ಪ್ರಗತಿ ಪರಾಮರ್ಶೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ವಿಷ್ಣುದೇವ್ ಸೇರಿದಂತೆ ನಕ್ಸಲ್ ಬಾಧಿತ ಏಳು ರಾಜ್ಯಗಳ ಮುಖ್ಯಮಂತ್ರಿಗಳು ರಾಜ್ಯಗಳ ಮುಖ್ಯಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಉನ್ನತ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಮೂರು ದಿನಗಳ ಛತ್ತೀಸ್‌ಘಡ ಪ್ರವಾಸದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು ನಕ್ಸಲೀಯರೊಂದಿಗೆ ಹೋರಾಟ ಮತ್ತು ಅವರ ಉಪಟಳಕ್ಕೆ ಕಡಿವಾಣ ಹಾಕುವ ಕುರಿತು ಸಮಗ್ರ ಚರ್ಚೆ ನಡೆಸುವ ನಿರೀಕ್ಷೆ ಇದೆ ಎಂದು ಹಿರಿಯ ಅಧಿಕಾರಿಗಳ ಮೂಲಗಳು ತಿಳಿಸಿವೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಮಿತ್ ಶಾ, ಮೂರು ದಿನಗಳ ಭೇಟಿಗಾಗಿ ಕಾರ್ಯಸೂಚಿಯ ಕುರಿತು ವಿವರವಾದ ಮಾಹಿತಿ ನೀಡಿ, ನಕ್ಸಲ್ ಚಟುವಟಿಕೆ ಮಟ್ಟ ಹಾಕಲು ಸಭೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಮತ್ತು ಛತ್ತೀಸ್‌ಗಢದ ಬಿಜೆಪಿ ಸರ್ಕಾರವು ನಕ್ಸಲಿಸಂ ಸಂಪೂರ್ಣ ನಿರ್ಮೂಲನೆಗೆ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಒಡಿಶಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್, ತೆಲಂಗಾಣ ಸೇರಿದಂತೆ ಮಾವೋವಾದಿ ದಂಗೆಯಿಂದ ಪೀಡಿತ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಮನ್ವಯ ಸಭೆ ನಡೆಸಲಿದ್ದಾರೆ.
ಮಧ್ಯಪ್ರದೇಶ. ಗಮನಾರ್ಹವಾಗಿ, ನಕ್ಸಲ್‌ನಿಂದ ಉಂಟಾಗುವ ನಿರಂತರ ಬೆದರಿಕೆ ಗಮನಿಸಿದರೆ, ಸಮನ್ವಯ ಸಭೆಯು ಛತ್ತೀಸ್‌ಘಡ ಮತ್ತು ಅದರ ನೆರೆಯ ರಾಜ್ಯಗಳಲ್ಲಿ ಶಾಂತಿ ಮತ್ತು ಅಭಿವೃದ್ಧಿ ಖಚಿತಪಡಿಸಿಕೊಳ್ಳಲು ನಿರ್ಣಾಯಕ ಸಭೆ ಇದಾಗಿದೆ ಎಂದು ಹೇಳಿದ್ದಾರೆ.
