ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್ಎಸ್ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್ಎಸ್ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.
