ಉದಯವಾಹಿನಿ, ಬೆಂಗಳೂರು: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ. ಈ ಬಗ್ಗೆ ಹಿರಿಯ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಕೂಡ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಇಂಥ ಸ್ಥಳಕ್ಕೆ ಹಾಕಬೇಕು. ಆಗ ಮಾತ್ರ ಈ ರೀತಿ ಘಟನೆಗಳು ಆಗೋದಿಲ್ಲ.ಯಾರು ಸೌಲಭ್ಯಗಳನ್ನು ಕೊಟ್ಟಿದ್ದಾರೆ ಅಂಥ ಗೃಹ ಮಂತ್ರಿಗಳಿಗೆ ಗೊತ್ತಿದೆ. ಅವರು ಕ್ರಮ ತೆಗೆದುಕೊಳ್ಳುತ್ತಾರೆ. ಕೆಳಹಂತದ ಸಿಬ್ಬಂದಿಯನ್ನು ಅಮಾನತು ಮಾಡಿದರೆ ಪ್ರಯೋಜನ ಇಲ್ಲ. ಈ ಘಟನೆಯಲ್ಲಿ ಯಾವ ದೊಡ್ಡ ಅಧಿಕಾರಿ ಇದ್ದರೂ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಆಗ ಮಾತ್ರ ಇಂತಹ ಘಟನೆ ಮುಂದೆ ಆಗಲ್ಲ ಎಂದರು

Leave a Reply

Your email address will not be published. Required fields are marked *

error: Content is protected !!