ಉದಯವಾಹಿನಿ, ಬೆಂಗಳೂರು: ಮತಾಂತರ ನಿಷೇಧ, ಗೋ ನಿಷೇಧ, ಸೇರಿದಂಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನು ವಾಪಸ್ಸು ಪಡೆದುಕೊಳ್ಳಲಾಗುವುದು ಅಂತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಎಲ್ಲಾ ಬಿಲ್‌ಗಳನ್ನು ಪರಿಶೀಲನೆ ಮಾಡಲಾಗುವುದು ಅಂತ ತಿಳಿಸಿದರು. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು, ಇದೇ ವೇಳೆ ಅವರು ಕನ್ನಡಿಗರಿಗೆ ತೊಂದರೆಯಾಗುವ ಎಲ್ಲಾ ಆದೇಶಗಳನ್ನು ಮತ್ತು ಪಠ್ಯ ಪುಸ್ತಕ ರಚನೆಗೆ ಸಂಬಂಧಪಟ್ಟಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಷ್ಕರಣೆ ಮಾಡಲಾಗುವುದು ಅಂತ ತಿಳಿಸಿದರು.ಪಠ್ಯ ಪರಿಷ್ಕರಣೆ ಕೂಡ ರಾಜ್ಯದಲ್ಲಿ ಸುದ್ದಿ ಮಾಡುತ್ತಿದ್ದು, ಈ ನಡುವೆ ರೋಹಿತ್ ಚಕ್ರತೀರ್ಥ ವಿರುದ್ದ ಕೂಡ ಆಕ್ರೋಶ ಕೇಳಿ ಬಂದಿದೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹಲವು ಮಂದಿ ಒತ್ತಾಯಿಸಿದ್ದಾರೆ. ಬಿಸಿ ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ವೇಳೆಯಲ್ಲಿ ತೆಗೆದುಕೊಂಡಿದ್ದ ನಿರ್ಧಾರಗಳು ಹಲವು ವಿವಾದಗಳಿಗೆ ಕಾರಣವಾಗಿದ್ದು, ರೋಹಿತ್ ಚಕ್ರತೀರ್ಥ ಸಮಿತಿ ಬಸವಣ್ಣ, ಕುವೆಂಪು, ಬಿ.ಆರ್. ಅಂಬೇಡ್ಕರ್, ಟಿಪ್ಪು ಸುಲ್ತಾನ್ ಅವರನ್ನು ಅವಮಾನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
