ಉದಯವಾಹಿನಿ, ಕೋಲಾರ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಲಕ್ಷ್ಮಿದೇವಮ್ಮ ಕುರಿಗಳು ರಮೇಶ್, ಉಪಾಧ್ಯಕ್ಷರಾಗಿ ಸಂಗೀತಾ ಜಗದೀಶ್ ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಅಭಿನಂದನೆ ಸಲ್ಲಿಸಿದರು.
ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡ ಮೈಲಾಂಡಹಳ್ಳಿ ಮುರಳಿ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.
