ಉದಯವಾಹಿನಿ, ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ, ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆ, ಪಶ್ಚಿಮ ಘಟ್ಟಗಳಲ್ಲಿನ ವಿಶೇಷ ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ 16ನೇ ಹಣ ಕಾಸು ಆಯೋಗಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ ಸೆಸ್ ಮತ್ತು ಸರ್ಚಾರ್ಜ್ನಲ್ಲೂ ಪಾಲು ನೀಡುವಂತೆ ಪ್ರತಿಪಾ ದಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯ, ಸದಸ್ಯರಾದ ಅಜಯ್ ನಾರಾಯಣ
ಝ, ಅನೈಜಾರ್ಜ್ ಮ್ಯಾಥ್ಯೂ, ಡಾ.ಮನೋಜ್ ಪಾಂಡೆ, ಡಾ.ಸೌಮ್ಯಕಾಂತಿ ಘೋಷ್ ಅವರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ಆರ್ಥಿಕ ಒಕ್ಕೂಟ ವ್ಯವಸ್ಥೆಯ ಸಹಭಾಗಿತ್ವವನ್ನು ಪ್ರತಿಪಾದಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ರಾಜ್ಯಗಳಿಗೆ ಮುಂದುವರೆದ ರಾಜ್ಯಗಳು ಬೆಂಬಲ ನೀಡುವುದು ಅತ್ಯಗತ್ಯ. ಆದರೆ ಅದು ಅವರದ್ದೇ ಸ್ವಂತ ನೆಲದ ಖರ್ಚುವೆಚ್ಚಗಳಿಗೆ ಮತ್ತು ಆರ್ಥಿಕ ಸಾಮರ್ಥ್ಯಕ್ಕೆ ದುಬಾರಿಯಾಗಬಾರದು. ಬೃಹತ್ ಪ್ರಮಾಣದ ಸಂಪನೂಲ ಸಂಗ್ರಹವಾಗುವ ರಾಜ್ಯಗಳಲ್ಲಿ ತಮಲ್ಲೇ ಹಣಕಾಸು ಹಂಚಿಕೆಯಾಗುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಗಮನ ಕೇಂದ್ರೀಕರಿಸಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಒತ್ತು ನೀಡುತ್ತಿದೆ. ನಗರೀಕರಣದ ಸವಾಲುಗಳು ನಮ ಮುಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಬೃಹತ್ ಪ್ರಮಾಣದ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮುಂದಿನ 5 ವರ್ಷಗಳಲ್ಲಿ 55,586 ಕೋಟಿ ರೂ.ಗಳ ಹೂಡಿಕೆಯ ಅಗತ್ಯವಿದ್ದು, ಇದಕ್ಕೆ ಹೊಂದಾಣಿಕೆಯ ಮೊತ್ತವಾಗಿರುವ 27,793 ಕೋಟಿ ರೂ.ಗಳನ್ನು ಕೇಂದ್ರಸರ್ಕಾರ ಅನುದಾನದ ರೂಪದಲ್ಲಿ ನೀಡಬೇಕಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 25,000 ಕೋಟಿ ರೂ. ನೀಡಬೇಕಿದ್ದು, ಇದಕ್ಕೆ ಸಮನಾಂತರವಾದ ನೆರವಿಗೆ ಹಣಕಾಸು ಆಯೋಗ ಶಿಫಾರಸ್ಸು ಮಾಡಬೇಕಿದೆ.

Leave a Reply

Your email address will not be published. Required fields are marked *

error: Content is protected !!