ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿರುವ ರಾಜ್ಯಪಾಲರ ಕ್ರಮದ ವಿರುದ್ಧ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ಪಂದಿಸಿದ್ದು ಸೂಕ್ತ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.
ಮುಡಾ ಪ್ರಕರಣದಲ್ಲಿ ಟಿ.ಜೆ.ಅಬ್ರಹಾಂ, ಪ್ರದೀಪ್‌ ಕುಮಾರ್‌, ಸ್ನೇಹಮಯಿ ಕೃಷ್ಣ ಅವರುಗಳು ನೀಡಿದ್ದ ದೂರನ್ನು ಪರಿಗಣಿಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿದ್ದಾರೆ.
ಇದನ್ನು ವಿರೋಧಿಸಿ ರಾಜ್ಯಪಾಲರ ವಿರುದ್ಧ ಆ.19 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆದಿದ್ದವು. ಅಂದು ಕಾಂಗ್ರೆಸ್‌‍ ಪಕ್ಷದ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್‌ಬಾಬು ರಾಷ್ಟ್ರಪತಿಯವರಿಗೆ ಇ-ಮೇಲ್‌ ಮೂಲಕ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ರಾಷ್ಟ್ರಪತಿಯವರ ಅಧೀನ ಕಾರ್ಯದರ್ಶಿ ಪಿ.ಸಿ.ಮೀನಾ ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ದೂರನ್ನು ರವಾನಿಸಿದ್ದು, ರಾಷ್ಟ್ರಪತಿಯವರಿಗೆ ಸಲ್ಲಿಕೆಯಾಗಿರುವ ಈ ಅರ್ಜಿಯ ಮೇಲೆ ಕ್ರಮ ತೆಗೆದುಕೊಂಡು ಅರ್ಜಿದಾರರಿಗೆ ನೇರವಾಗಿ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!