ಉದಯವಾಹಿನಿ,ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಿಕೆಟ್‌ ಸ್ಟಂಪ್ಸ್‌ನಿಂದ ದಾಳಿ ನಡೆಸಿದ್ದಾರೆ.ಮಾಣಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ತಂಡ ಕ್ರಿಕೆಟ್‌ ಸ್ಟಂಪ್ಸ್‌ನಿಂದ ಹಲ್ಲೆ ನಡೆಸಿದೆ ಎನ್ನುವ ಆರೋಪಗಳು ಕೇಳಿಬಂದಿವೆ.ವಿಧಾನಸಭೆ ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಇದು ಪ್ರತೀಕಾರ ಎನ್ನುವ ಶಂಕೆಯೂ ವ್ಯಕ್ತವಾಗಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಎನ್ನುವವರು ತಲ್ವಾರ್ ದಾಳಿಗೆ ಒಳಗಾದವರಾಗಿದ್ದಾರೆ.ಹೀಗೆ ಕ್ರಿಕೆಟ್‌ ಸ್ಟಂಪ್ಸ್‌ನಿಂದ ದಾಳಿಗೆ ಒಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಣಿ ಜಂಕ್ಷನ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ಕ್ರಿಕೆಟ್‌ ಸ್ಟಂಪ್ಸ್‌ನಿಂದ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಒಮ್ನಿ ಕಾರಿನಲ್ಲಿ ಬಂದ ತಂಡವೊಂದು ಡಿಕ್ಕಿ ಹೊಡೆದಿದೆ. ನಂತರ ಕಾರಿನಿಂದ ಇಳಿದು ಬಂದ ದುಷ್ಕರ್ಮಿಗಳು ಕ್ರಿಕೆಟ್‌ ಸ್ಟಂಪ್ಸ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಹಲ್ಲೆಗೊಳಗಾದವರ ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್, ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಲಿಂಗ ಮತ್ತಿತರರು ಹಲ್ಲೆ ನಡೆಸಿದ ಬಗ್ಗೆ ‌ದೂರು ದಾಖಲಿಸಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರ ತಂಡ ತನಿಖೆ ಮುಂದುವರೆಸಿದೆ.

Leave a Reply

Your email address will not be published. Required fields are marked *

error: Content is protected !!