ಉದಯವಾಹಿನಿ, ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಮಜರೆಕೊಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸಾಕ್ಷಿ ರಾಮಣ್ಣ ಕೊಳಮಲಿ ಕವಲಗಿ ಗ್ರಾಮದ ವಿನಾಯಕ ಸ್ಕೂಲಿನಲ್ಲಿ ನಡೆದ ಚಿಮ್ಮಲಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ನಿಡಗುಂದಿ ತಾಲೂಕ ಶಿಕ್ಷಕರ ಸಂಘದ ಅಧ್ಯಕ್ಷ ಎಮ್.ಎಸ್. ಮುಕಕಾರ್ತಿಹಾಳ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಾಲಾ ಸಿಬ್ಬಂದಿ ವರ್ಗ ವಿದ್ಯಾರ್ಥಿನಿ ಸಾಧನೆಗೆ ಹರ್ಷವನ್ನು ವ್ಯಕ್ತಪಡಿಸಿದ್ದಾರೆ
