ಉದಯವಾಹಿನಿ,ಗದಗ: ಬೆಟಗೇರಿ ನಗರಸಭೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯ ಮೊದಲನೇ ಅವಧಿ ಮುಗಿದು, ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡ ನಂತರದಿಂದ ಇಲ್ಲೀವರೆಗೆ ಹಲವು ರಾಜಕೀಯ ಮೇಲಾಟಗಳು, ಆರೋಪ- ಪ್ರತ್ಯಾರೋಪಗಳು, ಕಾನೂನು ಹೋರಾಟಗಳು ನಡೆದಿದ್ದು, ನಗರಸಭೆ ಗದ್ದುಗೆ ಏರಲು ಎರಡೂ ಪಕ್ಷಗಳು ನಡೆಸಿರುವ ಚತುರ ನಡೆಗಳು ಚುನಾವಣಾ ಕಣವನ್ನು ರಂಗೇರಿಸಿವೆ.
ಇದರ ಮಧ್ಯೆ, ಮೀಸಲಾತಿ ಪ್ರಕಟಗೊಂಡು 23 ದಿನಗಳ ಬಳಿಕ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿ ಧಾರವಾಡದ ಹೈಕೋರ್ಟ್‌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ಅದರ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಿದ್ದಾರೆ. ಇದರಿಂದಾಗಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆ ಕೂಡ ವಿಳಂಬವಾಗಲಿದೆ.ಈಗ ಸಿಕ್ಕಿರುವ 11 ದಿನಗಳ ಅವಧಿಯಲ್ಲಿ ನಗರಸಭೆ ಗದ್ದುಗೆ ಗುದ್ದಾಟಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳು ಆಗುವುದು ನಿಶ್ಚಿತ ಎಂಬ ಪರಿಸ್ಥಿತಿ ಮೇಲ್ನೋಟಕ್ಕೆ ಗೋಚರಿಸುತ್ತಿದೆ.

Leave a Reply

Your email address will not be published. Required fields are marked *

error: Content is protected !!