ಉದಯವಾಹಿನಿ, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲ್ದಿ ಪೋಕ್ಸೋ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಸಂತ್ರಸ್ತೆಯ ತಾಯಿಯ ಸಾವಿನ ಪ್ರಕರಣ ಮರುಜೀವ ಪಡೆದುಕೊಂಡಿದೆ.
ಸಂತ್ರಸ್ತೆಯ ತಾಯಿ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ.ರಾಜ್ಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷೀ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿಕೊಂಡಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಮತಾ ಸಾವು ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ?: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ 2024ರ ಮಾರ್ಚ್ 15ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ 354 (ಎ)ರಡಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
