ಉದಯವಾಹಿನಿ, ಬಂಗಾರಪೇಟೆ: ಪಟ್ಟಣದ ವಿವೇಕಾನಂದ ನಗರದಲ್ಲಿರುವ ಕನಕ ಭವನದಲ್ಲಿ ಬಂಗಾರಪೇಟೆ ತಾಲ್ಲೂಕು ಮಡಿವಾಳರ ನೌಕರರ ಬಳಗವತಿಯಿಂದ ೨೦೨೩-೨೪ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಕೇಂದ್ರಬಿಂದುವಾದ ವಯೋನಿವೃತ್ತ ಎಇಇಜಿ. ನಾರಾಯಣಸ್ವಾಮಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ೧೨ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ, ಮೈಲಿಗೆಯನ್ನು ಮಡಿ ಮಾಡುವಂತಹ ವೃತ್ತಿಯಲ್ಲಿ ಜನಿಸಿದ ತಳ ಸಮುದಾಯದ ಒಬ್ಬ ವ್ಯಕ್ತಿ ೧೨ ನೇ ಶತಮಾನದಲ್ಲಿನ ಸಮಾಜದಲ್ಲಿದ್ದ ಕೆಲವು ಕೆಟ್ಟ ಮನಸ್ಥಿತಿಗಳ ಮನಸ್ಸುಗಳನ್ನು ತೊಳೆಯುವ ಕೆಲಸವನ್ನು ಮಡಿವಾಳ ಮಾಚಿದೇವರು ಮಾಡಿದ್ದಾರೆ.
ಈ ಸಮಾಜವನ್ನು ಸರಿದಾರಿಯಲ್ಲಿ ತರಬೇಕೆಂಬ ಆಶಯದಂತೆ ಎಲ್ಲಾ ಸಮುದಾಯವನ್ನು ಸಮಾನವಾಗಿ ಒಗ್ಗೂಡಿಸಿಕೊಂಡು ಹೋಗಬೇಕೆಂದು ಬಸವಣ್ಣನವರ ಆಶಯದಂತೆ ಮಾಚಿದೇವರು ಸಹ ಶ್ರಮಪಟ್ಟಂತವರು ಈಗಿನ ನಮ್ಮ ಸಮಾಜದಲ್ಲಿ ನಾವೆಲ್ಲರೂ ಉತ್ತಮ ಬಟ್ಟೆಯನ್ನು ತೊಡಗಿಕೊಂಡು ಬರುತ್ತೇವೆ ಎಂದರೆ ಅದಕ್ಕೆ ಮೂಲ ಕಾರಣಕಾರರು ನಮ್ಮ ಮಡಿವಾಳ ಸಮಾಜದವರು ಎಂದರೆ ತಪ್ಪಾಗಲಾರದು.  ಇಂತಹ ಸಮುದಾಯದಲ್ಲಿ ಹುಟ್ಟಿದ ನಾವು ಯಾವುದಕ್ಕೂ ಅಂಜದೆ ಕೆಳಗುಂದದೆ ವಿದ್ಯಾಭ್ಯಾಸದಲ್ಲಿ ಎಲ್ಲರಂತೆ ನಾವು ಸಹ ಮುಂಚೂಣಿಯಲ್ಲಿರಬೇಕು, ಸರ್ಕಾರದ ಉನ್ನತ ಉದ್ಯೋಗಗಳನ್ನು ಅಲಂಕರಿಸಿ ಸಮಾಜದಲ್ಲಿ ಸೇವೆ ಸಲ್ಲಿಸಬೇಕು ಐಎಎಸ್, ಕೆಎಎಸ್, ಐಪಿಎಸ್, ಡಾಕ್ಟರ್, ಇಂಜಿನಿಯರ್, ನ್ಯಾಯಾಧೀಶರ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿ ನಮ್ಮ ಮಡಿವಾಳ ಸಮುದಾಯದ ಘನತೆಯನ್ನು ಎತ್ತಿ ಹಿಡಿಯಬೇಕು, ಆಗ ಮಾತ್ರ ನಮ್ಮ ಸಮುದಾಯಕ್ಕೆ ಸಮಾಜದಲ್ಲಿ ಒಳ್ಳೆಯ ಹಿಡಿತ ಸಿಗಲಿದೆ, ಈಗಿನ ವಿದ್ಯಾರ್ಥಿಗಳು ಮೊಬೈಲ್ ಚಟಕ್ಕೆ ಬಿದ್ದು ಹೆಚ್ಚಿನ ಕಾಲ ಕಳೆಯುತ್ತಿದ್ದಾರೆ ಈ ಕೆಟ್ಟ ಪದ್ಧತಿಗೆ ತಿಲಾಂಜಲಿ ನೀಡಿ ವಿದ್ಯಾಭ್ಯಾಸದ ಕಡೆ ಗಮನ ಹರಿಸಿ ಎಂದರು.

Leave a Reply

Your email address will not be published. Required fields are marked *

error: Content is protected !!