ಉದಯವಾಹಿನಿ, ಚಂಡೀಗಢ : ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಭಕ್ತರನ್ನು ಸಾಗಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಸ್ಸಾರ್ ರಾಷ್ಟ್ರೀಯ ಹೆದ್ದಾರಿಯ ಬಿಧರನಾ ಗ್ರಾಮದಲ್ಲಿ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹಿಸಾರ್ನ ಜಿಂದ್ ಮತ್ತು ಆಗ್ರೋಹಾ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಸದರ್ ನರ್ವಾನಾದ ಎಸ್ಎಚ್ಒ ಇನ್ಸ್ ಪೆಕ್ಟರ್ ಕುಲದೀಪ್ ತಿಳಿಸಿದ್ದಾರೆ. ಕುರುಕ್ಷೇತ್ರ ಜಿಲ್ಲೆಯಿಂದ ರಾಜಸ್ಥಾನದ ಗೊಗಮೇಡಿ ಎಂಬಲ್ಲಿನ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಭಕ್ತರ ಗುಂಪು ಗೋಗಮೇಡಿಗೆ ತೆರಳುತ್ತಿದ್ದ ಲಘು ವಾಣಿಜ್ಯ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯ ಸಮಯದಲ್ಲಿ, ಭಕ್ತರು ಸ್ವಲ್ಪ ಸಮಯದವರೆಗೆ ನಿಲ್ಲಿಸಿದ್ದರು ಮತ್ತು ಅವರ ವಾಹನ ನಿಂತಿತ್ತು ಎಂದು ಎಸ್ಎಚ್ಒ ಪಿಟಿಐಗೆ ಫೋನ್ ಮೂಲಕ ತಿಳಿಸಿದರು. ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಹದಿಹರೆಯದವರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!