ಉದಯವಾಹಿನಿ, ಬೆಂಗಳೂರು: ಮುಡಾ ಪ್ರಕರಣದಲ್ಲಿ ಹಿಂದಿನ ಆಯುಕ್ತ ದಿನೇಶ್ಕುಮಾರ್ ಅಮಾನತಾಗಿರುವುದರಿಂದ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ಯಾವ ಕಾರಣಕ್ಕಾಗಿ ಅಮಾನತು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಒಬ್ಬ ಆಯುಕ್ತರೇ ಅಮಾನತುಗೊಂಡಿರುವುದರಿಂದ ಅಲ್ಲಿಗೆ ಹಗರಣ ನಡೆದಿದೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಿದೆ ಎಂದು ಹೇಳಿದರು. ಈ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲವೆಂದು ಸಿದ್ದರಾಮಯ್ಯನವರು ಹೇಳುತ್ತಿದ್ದರು.
ದಿನೇಶ್ಕುಮಾರ ಯಾವ ಕಾರಣಕ್ಕಾಗಿ ಅಮಾನತುಪಡಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ. ಬರುವ ದಿನಗಳಲ್ಲಿ ಸಿಎಂ ರಾಜೀನಾಮೆ ನೀಡುವುದು ಶತ ಸಿದ್ಧ, ಕಾದು ನೋಡಿ ಎಂದು ಸೂಚ್ಯವಾಗಿ ಹೇಳಿದರು. ಮೇಲನೆ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ದೂರು ನೀಡಿರುವ ವಿಚಾರ ಕುರಿತು ಸಿಡಿಮಿಡಿಗೊಂಡ ವಿಜಯೇಂದ್ರ, ನಾನು ಸಚಿವ ಪ್ರಿಯಾಂಕ ಖರ್ಗೆಯವರಿಗೆ ಒಂದು ಪ್ರಶ್ನೆ ಕೇಳುತ್ತೇನೆ.
