ಉದಯವಾಹಿನಿ, ಹಾವೇರಿ : ರಾಜ್ಯದ ಅಭಿವೃದ್ಧಿ ರಥಕ್ಕೆ ಅಡ್ಡಿಪಡಿಸಿದರೆ ಯಾರ ಅಪ್ಪನ್ನು ಕೇಳುವುದಿಲ್ಲ. ಜನರು ಮೆಚ್ಚುವ ರಾಜಕಾರಣ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ಶಿಗ್ಗಾಂವಿ ಪಟ್ಟಣದಲ್ಲಿ ಮತದಾರರಿಗೆ ಕೃತಜ್ಞತಾ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮೊನ್ನೆ ಮೊದಲ ಸಚಿವ ಸಂಪುಟ ಸಭೆ ಅಯಿತು. ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಎಲ್ಲ ಗ್ಯಾರಂಟಿಗೆ ಆದೇಶ ಮಾಡುತ್ತೇವೆ ಎಂದಿದ್ದರು. ಇವರಾದರೂ ಜನರಿಗೆ ಏನಾದರೂ ಮಾಡಲಿ ಎಂದು ನಾನು ಖುಷಿ ಆಗಿದ್ದೆ. ಆದರೆ ಸಂಪುಟ ಸಭೆಯ ಬಳಿಕ ಪತ್ರಕರ್ತರು ಪ್ರಶ್ನೆ ಕೇಳುವಾಗ ತಡಬಡಿಸಿ, ಪ್ರಶ್ನೆ ಕೇಳಿದರೆ ಹಿಂದಿನ ಇತಿಹಾಸ ಹೇಳಿ ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದರು.ಹಳೆಯದ್ದು ಎಲ್ಲ ಬೇಡ, ಗ್ಯಾರಂಟಿಗಳನ್ನು ಯಾವಾಗ ಮಾಡುತ್ತಿರಿ ಅಂತ ಕೇಳಿದರೆ, ಮುಂದಿನ ಸಂಪುಟ ಸಭೆಯಲ್ಲಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇವರು ಮುಖ್ಯಮಂತ್ರಿ ಆಗುವುದಕ್ಕೆ, ಮಂತ್ರಿ ಆಗುವುದಕ್ಕೆ ಬಡಿದಾಡುತ್ತಿದ್ದಾರೆ. ಹೊಸದಾಗಿ ಮದುವೆಯಾದ ಸೊಸೆ ಕೈಯಲ್ಲಿ ಕೀಲಿ ಇರಲ್ಲವಂತೆ, ಸೊಸೆ ಕೈಯಲ್ಲಿ ಕೀಲಿನು ಇಲ್ಲ, ಜವಾಬ್ದಾರಿನೂ ಇಲ್ಲ. ಇವರ ಸಂಪುಟದ ಸಚಿವರಿಗೆ ಯಾರಿಗೂ ಖಾತೆ ಕೊಟ್ಟಿಲ್ಲ. ಕೆಲವರಿಗೆ ಸಚಿವ ಸ್ಥಾನ ಇಲ್ಲ. ಸಚಿವ ಸ್ಥಾನ ಇಲ್ಲದವರಿಗೆ ಖಾತೆ ಇಲ್ಲ ಎಂದು ವ್ಯಂಗ್ಯವಾಡಿದರು.ಮೊನ್ನೆ ನಡೆದ ಅಸೆಂಬ್ಲಿಯಲ್ಲಿ ನಾನು ಸಿದ್ದರಾಮಯ್ಯನವರಿಗೆ ಮಂತ್ರಿಗಳಿಗೆ ಖಾತೆ ನೀಡಿ ಕೇಳಿದೆ. ನೀವು ಚಿಂತೆ ಮಾಡಬೇಡಿ ಅಂತ ಹೇಳಿದರು. ನನಗೆ ಚಿಂತೆ ಇಲ್ಲ. ನಿಮ್ಮ ಸಚಿವರು ಮಾತನಾಡಿ ಅಂದರು, ಅದಕ್ಕೆ ಕೇಳಿದೆ ಎಂದಿದ್ದೆ. ಸಚಿವರನ್ನಾಗಿ ಸುಮ್ಮನೆ ಕೂರಿಸಿದ್ದಾರೆ. ಮುಖ್ಯಮಂತ್ರಿ ಆದವರು ಈ ರಾಜ್ಯದ ಮಾಲಿಕರಲ್ಲ. ಕೊಟ್ಟಿರುವ ಜವಾಬ್ದಾರಿಯನ್ನು ಈ ರಾಜ್ಯದ ಜನರ ಒಳಿತಿಗಾಗಿ ಕೆಲಸ ಮಾಡಬೇಕು ಎಂದರು.
