ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೇರ ಆರೋಪ ಮಾಡಿದ್ದಾರೆ.ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಅಶ್ವಥ್ ನಾರಾಯಣ್ ವಿರುದ್ಧ ನೀಡಿದ್ದ ದೂರಿನ ಕ್ರಮಕ್ಕೆ ಒತ್ತಾಯಿಸುತ್ತಿದ್ದೇವೆ.ಉರಿಗೌಡ, ನಂಜೇಗೌಡ ಟಿಪ್ಪುವನ್ನ ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಿ ಎಂದಿದ್ದ ಅಶ್ವಥ್ ನಾರಾಯಣ ಈ ಹೇಳಿಕೆ ವಿಡಿಯೋ ಈಗಲೂ ವೈರಲ್ ಆಗುತ್ತಿದೆ. ಇದರಿಂದ ಸಿದ್ದರಾಮಯ್ಯರ ಮೇಲೆ ಮತ್ತೆ ದಾಳಿಯಾಗುವ ಸಾಧ್ಯತೆ ಇದೆ. ಸಿದ್ದರಾಮಯ್ಯರಿಗೆ ಏನೇ ಆದರು ಅದಕ್ಕೆ ಬಿಜೆಪಿ, ಅಶ್ವಥ್ ನಾರಾಯಣ್ ಹೊಣೆ ಎಂದು ವಾಗ್ದಾಳಿ ಮಾಡಿದ್ದಾರೆ.
