ಉದಯವಾಹಿನಿ, ಕೆ.ಆರ್.ಪುರ: ಬಿದರಹಳ್ಳಿ ಗ್ರಾಮ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಶಾಸಕಿ ಮಂಜುಳಾ ಅರವಿಂದಲಿಂಬಾವಳಿ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರದ ಬಿದರಹಳ್ಳಿಯಲ್ಲಿ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಹಂತಹಂತವಾಗಿ ಜಾರಿಗೊಳಿಸಲಾಗುವುದೆಂದು ನುಡಿದರು.
ಇನ್ನೂ ಗ್ರಾಮಸಭೆಯಲ್ಲಿ ಕುಡಿಯುವ ನೀರು, ಒಳಚರಂಡಿ, ರಸ್ತೆ, ಬಡವರಿಗೆ ಹಕ್ಕಪತ್ರ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಹೇಳಿಕೊಂಡರು, ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಶೀಘ್ರವೇ ಅನುದಾನ ತಂದು ಬಾಕಿ ಉಳಿದಿರವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದರು.ಹೊಲಿಗೆಯಂತ್ರ, ಕ್ಷೌರಿಕರ ಕಿಟ್, ಇಸ್ತ್ರಿಪೆಟ್ಟಿಗೆ, ವಿಧವೆ,ಅಂಗವಿಕಲರು ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಪರಿಹಾರದ ಚೆಕ್ ಗಳನ್ನು ವಿತರಿಸಲಾಯಿತು.
