ಉದಯವಾಹಿನಿ, ಮೈಸೂರು : ಜೂನ್ 1 ರಿಂದ 200 ಯೂನಿಟ್ ಒಳಗೆ ಕರೆಂಟ್ ಬಿಲ್ ಬಂದರೆ ಕಟ್ಟಬೇಡಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಗ್ಯಾರೆಂಟಿ ಕಾರ್ಡ್ ನಲ್ಲಿ ಕಾಂಗ್ರೆಸ್ ನವರು ಎಲ್ಲಿ ಕೂಡ ಷರತ್ತು ಅನ್ವಯ ಎಂದು ನಮೂದಿಸಿಲ್ಲ, ಜೂನ್ 1 ರಿಂದ 200 ಯೂನಿಟ್ ಒಳಗೆ ಕರೆಂಟ್ ಬಿಲ್ ಬಂದರೆ ಕಟ್ಟಬೇಡಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.ಜನರು ಗ್ಯಾರೆಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ. ಕಾಂಗ್ರೆಸ್ ನವರು ಇದನ್ನು ನೆನಪಿನಲ್ಲಿಟ್ಟುಕೊಳ್ಳಲಿ, ಈಗ ಉಲ್ಟಾ ಹೊಡೆಯುವುದು ಬೇಡ. ಜನರಿಗೆ ನೀಡಿರುವ ಭರವಸೆ ಈಡೇರಿಸಲಿ ಎಂದರು.ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್ 1 ರೊಳಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ., ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಳ್ಳಬೇಕಿತ್ತು. ಎಚ್ಚೆತ್ತುಕೊಂಡಿದ್ದರೆ ಬಿಜೆಪಿ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಪರ ಇದ್ದೇನೆ. ಗ್ಯಾರಂಟಿ ಕಾರ್ಡ್ ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಲ್ಲ. ಜೂನ ್1 ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಷರತ್ತು ವಿಧಿಸಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
