ಉದಯವಾಹಿನಿ, ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌‍ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌‍ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ.
ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಆಗ್ರಹಿಸಿದರು.ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ. ನಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!