ಉದಯವಾಹಿನಿ, ಕೋಲಾರ : ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾ ವ್ಯಾಪ್ತಿಯಲ್ಲಿನ ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ವಾಪಾಸ್ಸಾಗುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರೀಯ ಹೆದ್ದಾರಿ ಮಾರ್ಗದ ಮಧ್ಯೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಾಗತಿಸಿ ಪುಷ್ಪಗುಚ್ಚವನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್. ಬಿ ಮತ್ತು ಇತರೆ ಅಧಿಕಾರಿಗಳು ಹಾಜರಿದ್ದು ಶುಭ ಹಾರೈಸಿದರು.
