ಉದಯವಾಹಿನಿ,ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವನೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ತಲಾ 5,000 ಸಾವಿರ ರೂಪಾಯಿ ಮೌಲ್ಯದ ಕೂಪನ್ಗಳನ್ನು ಹಂಚಿ ಗೆದ್ದಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.ಈ ಕುರಿತು ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್ಡಿಕೆ ಕಾಂಗ್ರೆಸ್ ವಿರುದ್ಧ ಸರಣಿ ಆರೋಪಗಳನ್ನು ಮಾಡುವ ಮೂಲಕ ಹರಿಹಾಯ್ದಿದ್ದಾರೆ.ಅಕ್ರಮ ಎಸಗಿದ್ದಾರೆ ಮತದಾನ ನಡೆಯುವ ಮುನ್ನಾ ದಿನ ಕಾಂಗ್ರೆಸ್ ಅಭ್ಯರ್ಥಿಗಳು ಮತದಾರರಿಗೆ ಕೂಪನ್ಗಳನ್ನು ಹಂಚಿದ್ದಾರೆ. ರಾಮನಗರ, ಮಾಗಡಿ,ರಾಜರಾಜೇಶ್ವರಿ ನಗರ ಸೇರಿದಂತೆ ರಾಜ್ಯದ 45ರಿಂದ 50 ವಿಧಾನಸಭೆ ಕ್ಷೇತ್ರಗಳಲ್ಲಿಈ ರೀತಿಯ ಅಕ್ರಮವನ್ನು ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೋಡ್ಗಳು ಉಳ್ಳ ಈ ಕೂಪನ್ಗಳೇ ಕಾರಣ. ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ ಎಂದು ದೂರಿದ್ದಾರೆ.ಮೂರು ಸಾವಿರ ಹಾಗೂ ಐದು ಸಾವಿರ ಮೊತ್ತದ ಕ್ಯೂ ಆರ್ ಕೋಡ್ಗಳನ್ನು ಹೊಂದಿರುವ ಕೂಪನ್ಗಳನ್ನು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಮತದಾರರಿಗೆ ಹಂಚಲಾಯಿತು. ಈ ಕೂಪನ್ ಗಳಿಂದಲೇ ನಾವು ಸೋಲಬೇಕಾಯಿತು. ಕಾಂಗ್ರೆಸ್ ಅಕ್ರಮವಾಗಿ ಗೆದ್ದಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೀರಾ ಮಿಸ್ಟರ್ ಸಿದ್ದರಾಮಯ್ಯ ಎಂದು ಹರಿಹಾಯ್ದಿದ್ದಾರೆ.
