ಉದಯವಾಹಿನಿ, ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್‌ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ನಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದರು.
ನಮ ದೇಶದ ಆಧ್ಯಾತಿಕ ಜ್ಞಾನಿಗಳಾದ ಬುದ್ದ, ಬಸವಣ್ಣನ ಕಾಲದಲ್ಲೇ ನಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅಲ್ಲಮಪ್ರಭುಗಳ ಆಧ್ಯಾತಿಕ ಸಾಹಿತ್ಯಿಕ ಆಸ್ಥಾನವಾದ ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದು ಹೇಳಿದರು.

1949ರ ನವೆಂಬರ್‌ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಅವರು, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದರು.
ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮಾನವೀಯ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ, ಪಾಲಿಸುವ ಪ್ರಯತ್ನ ಮುನ್ನಡೆಸಿದ್ದೇವೆ ಎಂದು ಹೇಳಿದರು.ನಮ ರಾಷ್ಟ್ರಗೀತೆ ಮತ್ತು ನಮ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮದಾಗಬೇಕು ಎಂದರು.

 

Leave a Reply

Your email address will not be published. Required fields are marked *

error: Content is protected !!