ಉದಯವಾಹಿನಿ, ಶಿರಾ: ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಅಭಿವೃದ್ಧಿಗಾಗಿ ಶಿರಾ ಯೋಜನಾ ಪ್ರಾಧಿಕಾರವನ್ನು ಮೇಲ್ದರ್ಜೆಗೇರಿಸಿ ಸೆಪ್ಟೆಂಬರ್ 11ರಿಂದ ಜಾರಿಗೆ ಬರುವಂತೆ ಶಿರಾ ನಗರಾಭಿವೃದ್ಧಿ ಪ್ರಾಧಿಕಾರವನ್ನಾಗಿ ರಚಿಸಿ ಸರ್ಕಾರ ಆದೇಶಿಸಿದೆ.
ಶಿರಾ ಪಟ್ಟಣವು ತಾಲ್ಲೂಕು ಕೇಂದ್ರ ಸ್ಥಾನವಾಗಿದ್ದು, ಪಟ್ಟಣದ ಯೋಜನಾಬದ್ಧ ಬೆಳವಣಿಗೆಯ ಉದ್ದೇಶದಿಂದ ಹಾಗೂ ಸದರಿ ಪ್ರದೇಶದ ವ್ಯಾಪ್ತಿಯಲ್ಲಿನ ಅಭಿವೃದ್ಧಿಗಳನ್ನು ನಿಯಂತ್ರಿಸಲು ಶಿರಾ ಸ್ಥಳೀಯ ಯೋಜನಾ ಪ್ರದೇಶವನ್ನು ಮೇಲ್ದರ್ಜೆಗೇರಿಸಿ ಶಿರಾ ನಗರಾಭಿವೃದ್ಧಿ ಪ್ರಾಧಿಕಾರವನ್ನಾಗಿ ರಚಿಸಲು ಸರ್ಕಾರವು ತೀರ್ಮಾನಿಸಿದೆ.
ಶಿರಾ ಸ್ಥಳೀಯ ಯೋಜನಾ ಪ್ರದೇಶದಲ್ಲಿನ ನಗರಸಭೆ ವ್ಯಾಪ್ತಿ ಮತ್ತು ಸುತ್ತಮುತ್ತಲಿನ 51 ಗ್ರಾಮಗಳಿಗೆ ಸೀಮಿತಗೊಳಿಸಿ ಪರಿಷ್ಕೃತ ಸ್ಥಳೀಯ ಯೋಜನಾ ಪ್ರದೇಶವನ್ನು ಘೋಷಿಸಿ ಸದರಿ ಯೋಜನಾ ಪ್ರಾಧಿಕಾರದ ಎಲೆಯನ್ನು ನಿಗದಿಪಡಿಸಿ ಸರ್ಕಾರ ಆದೇಶಿಸಿದೆ.
