ಉದಯವಾಹಿನಿ,ದೆಹಲಿ: ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ 48 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಕರೆ ಮಾಡಿದ ಆರೋಪಿಯನ್ನು ದೆಹಲಿಯ ರಾಯಗರ್​ಪುರ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದೆ. ಬೆದರಿಕೆ ಕರೆ ಬಂದ ತಕ್ಷಣವೇ ತ್ವರಿತವಾಗಿ ಕ್ರಮ ಕೈಗೊಂಡ ಪೊಲೀಸ್​ ಅಧಿಕಾರಿಗಳು, ಪೋನ್​ ಕರೆ ಟ್ರ್ಯಾಕ್​ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!