ಉದಯವಾಹಿನಿ, ಕಲಬುರಗಿ: ಸಚಿವ ಸಂಪುಟ ಸಭೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ರಾಜ್ಯದ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ. ಆದರೆ ನಮ ಭಾಗದ ದೀರ್ಘಕಾಲಿಕ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹ್ದುೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹ್ದುೆ ತುಂಬಲಾಗುವುದು. ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹ್ದುೆ ತುಂಬಲಾಗುವುದು ಎಂದು ಹೇಳಿದರು.
ನಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿಹ್ದುೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ದು, ಅದಕ್ಕೆ ಬದ್ಧವಾಗಿದ್ದೇವೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಮೆಡಿಕಲ್‌ ಕಾಲೇಜುಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದು ಇತ್ತೀಚೆಗೆ ನಡೆಯುತ್ತಿರುವ ಕೆಲವು ಕೋಮು ಸೂಕ್ಷ್ಮ ಘಟನೆಗಳಿಗೆ ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

error: Content is protected !!