ಉದಯವಾಹಿನಿ, ಬೈಲಹೊಂಗಲ: ಪಟ್ಟಣದ ಪುರಸಭೆ ಆವರಣದಲ್ಲಿ ವಿಶ್ವಕರ್ಮ ಮಹೋತ್ಸವಕ್ಕೆ ಚಾಲನೆ ದೊರೆಯಿತು. ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಶಾಸಕ ಮಹಾಂತೇಶ ಕೌಜಲಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜು ಬಡಿಗೇರ ತಿಳಿಸಿದರು. ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ, ತಹಸೀಲ್ದಾರ್ ಹಣಮಂತ ಶಿರಹಟ್ಟಿ, ಪುರಸಭೆ ಮುಖ್ಯಾಧಿಕಾರಿ ವಿರೇಶ ಹಸಬಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ, ಪ್ರಮೋದ ಕುಮಾರ ವಕ್ಕುಂದಮಠ ಸೇರಿದಂತೆ ಸಮಾಜದ ಗುರುಹಿರಿಯರು ಭಾಗಿಯಗಿದ್ದರು.
