ಉದಯವಾಹಿನಿ, ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆದ ಬೆನ್ನಲ್ಲೆ. ಶಾಸಕ ಮುನಿರತ್ನ ಅವರನ್ನು ಜೀವಬೆದರಿಕೆ ಹಾಗೂ ಜಾತಿ ನಿಂದನೆ ಎರಡು ಪ್ರಮುಖ ಪ್ರಕರಣಗಳಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸದ್ಯ ಪೊಲೀಸ್ ವಶದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ತಕ್ಷಣವೇ ಪೊಲೀಸರು ಜಯದೇವ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಪೊಲೀಸರಿಂದ ಬಿಗಿ ಬಂದೋಬಸ್ತ್: ಹೌದು, ಪೊಲೀಸರ ವಶದಲ್ಲಿರುವ ಶಾಸಕ ಮುನಿರತ್ನ ಅವರಿಗೆ ಆರೋಗ್ಯದ ಸಮಸ್ಯೆ ಉಂಟಾಗಿದ್ದು, ಕೂಡಲೆ ಅವರನ್ನು ಜಯದೇವ ಆಸ್ಪತ್ರೆ ಚಿಕಿತ್ಸೆಗೆ ರವಾನೆ ಮಾಡಲಾಯಿತು. ಈ ಸಂದರ್ಭದಲ್ಲಿ ತುರ್ತು ನಿಗಾ ಘಟಕದಲ್ಲಿ ಶಾಸಕ ಮುನಿರತ್ನಗೆ ಚಿಕಿತ್ಸೆ ನೀಡಲಾಗಿದೆ. ಈ ಸಂದರ್ಭದಲ್ಲಿ ಮೈಕೋಲೇಔಟ್ ಹಾಗೂ ತಿಲಕ್ ನಗರ ಪೊಲೀಸರು ಜಯದೇವ ಆಸ್ಪತ್ರೆ ಬಳಿ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ಒದಗಿಸಿದ್ದರು. ಜಯದೇವ ಆಸ್ಪತ್ರೆ ವೈದ್ಯರು ಮುನಿರತ್ನ ಅವರನ್ನು ತಪಾಸಣೆ ನಡೆಸಿದ್ದಾರೆ.
