ಉದಯವಾಹಿನಿ,ಬೆಂಗಳೂರು, : ಪ್ರಧಾನಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನ ಉದ್ಘಾಟನೆ ವಿರೋಧಿಸಿ ಕಾರ್ಯಕ್ರಮ ಬಹಿಷ್ಕರಸಲು ನಿರ್ಧರಿಸಿದ್ದ ವಿಪಕ್ಷ ನಾಯಕರಿಗೆ ಮುಖಭಂಗವಾಗಿದೆ. ಸುಪ್ರೀಂ ಕೋರ್ಟ್ ವಿಪಕ್ಷಗಳಿಗೆ ಕಪಾಳಮೋಕ್ಷ ಮಾಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ನೂತನ ಸಂಸತ್ ಭವನ ಉದ್ಘಾಟನೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಸಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ರಾಷ್ಟ್ರಪತಿಯವರಿಂದಲೇ ಉದ್ಘಾಟನೆಯಾಗಬೇಕು ಎಂದು ಲೋಕಸಭೆ ಕಾರ್ಯಾಲಯಕ್ಕೆ ನಿರ್ದೇಶನ ನೀಡಲು ಕೋರಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು.ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಯವರು, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ಮಾಡಿರುವ ವಿಪಕ್ಷಗಳಿಗೆ ಸುಪ್ರೀಂ ಕೋರ್ಟ್‌ ನಿರ್ಧಾರವು ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಅವರು ವಿಪಕ್ಷಗಳ ವಿರುದ್ಧ ಹರಿಹಾಯ್ದರು.

Leave a Reply

Your email address will not be published. Required fields are marked *

error: Content is protected !!