ಉದಯವಾಹಿನಿ, ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ನೇಮಕಾತಿಯನ್ನು ರಾಜ್ಯ ಸರ್ಕಾರವೇ ನೇರವಾಗಿ ನೇಮಕಾತಿ ಮಾಡಲು ಮುಂದಾಗಿದ್ದು, ಈವರೆಗೆ ರಾಜ್ಯಪಾಲರಿಗಿದ್ದ ಅಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ.
ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಉಪಕುಲಪತಿ ನೇಮಕಾತಿ ಮಾಡುವ ಅಧಿಕಾರವನ್ನು ಹೊಂದಿದ್ದರು. ಅದರೆ ಸರ್ಕಾರ ಶಿಫಾರಸ್ಸು ಮಾಡುವ ಹೆಸರುಗಳಿಗೆ ಅಂಕಿತ ಹಾಕುವುದು ಅವರ ಕರ್ತವ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಉಪಕುಲಪತಿಗಳ ನೇಮಕಾತಿ ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರಿಗಿದ್ದ ಅಧಿಕಾರವನ್ನು ಹಿಂಪಡೆದು ಸಚಿವ ಸಂಪುಟದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳು ನೇಮಕಾತಿ ಮಾಡುವ ವಿಶೇಷ ಅಧಿಕಾರವನ್ನು ಪಡೆಯಲಿದ್ದಾರೆ.
ಕಲಬುರಗಿಯಲ್ಲಿ ನಡೆ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ 2024ಕ್ಕೆ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರವೇ ಕುಲಪತಿ ನೇಮಕಾತಿ ಮಾಡುವ ಅಧಿಕಾರವನ್ನು ಹೊಂದಿದೆ.
ಮಸೂದೆ ಮಂಡನೆ: ಮೂಲಗಳ ಪ್ರಕಾರ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ರಾಜ್ಯಪಾಲರ ಅಧಿಕಾರವನ್ನು ಹಿಂಪಡೆಯುವ ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ.

Leave a Reply

Your email address will not be published. Required fields are marked *

error: Content is protected !!