ಉದಯವಾಹಿನಿ, ಮೈಸೂರು: ಕರ್ನಾಟಕದಲ್ಲಿ ಕನ್ನಡವೇ ಅಗ್ರ ಭಾಷೆ. ನಾಡುನುಡಿ, ಸಂಸ್ಕøತಿ, ಭಾಷೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಇದು ಬೂಟಾಟಿಕೆಯೂ ಅಲ್ಲ. ಭಾಷೆ, ಸಂಸ್ಕøತಿ ಮೇಲಿನ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ, ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ದೇವರಾಜ ಅರಸರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣಗೊಂಡು 50 ವರ್ಷದ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಮಾಡಬೇಕಿತ್ತು. ಅವರು ಮಾಡಲಿಲ್ಲ. ಹೀಗಾಗಿ ನಾನು ಸುವರ್ಣ ಸಂಭ್ರಮವನ್ನು ಬಜೆಟ್‍ನಲ್ಲೇ ಘೋಷಿಸಿ ಇದನ್ನು ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಬೇಕು. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರೆ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ ದ್ವೇಷಿಗಳಲ್ಲ. ಸಾಧ್ಯವಿರುವಷ್ಟು ಭಾಷೆಗಳನ್ನೆಲ್ಲಾ ಕಲಿತರೆ ಒಳ್ಳೆಯದೆ. ಆದರೆ, ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಿಸಿ ಕನ್ನಡವನ್ನು ಪೂರ್ತಿಯಾಗಿ ಬಳಸಬೇಕು. ಇದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದರು.
ತಮಿಳುನಾಡಿನಲ್ಲಿ ತಮಿಳಿನಲ್ಲಿ, ಕೇರಳದಲ್ಲಿ ಮಲಯಾಳಂನಲ್ಲಿ, ಆಂಧ್ರದಲ್ಲಿ ತೆಲುಗಿನಲ್ಲಿ, ಮಹಾರಾಷ್ಟ್ರದಲ್ಲಿ ಮರಾಠಿಯಲ್ಲೇ ವ್ಯವಹರಿಸುತ್ತಾರೆ. ಆದg,É ನಮ್ಮಲ್ಲಿ ಕನ್ನಡ ಬಿಟ್ಟು ಅವರವರ ಭಾಷೆಯಲ್ಲೇ ಹೆಚ್ಚು ವ್ಯವಹರಿಸಲು ಉತ್ಸುಕರಾಗಿ ಉದಾರಿ ಅನ್ನಿಸಿಕೊಂಡಿದ್ದೇವೆ. ಇದು ಅಷ್ಟು ಸರಿಯಲ್ಲ. ಕನ್ನಡದ ವಾತಾವರಣ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

Leave a Reply

Your email address will not be published. Required fields are marked *

error: Content is protected !!