ಉದಯವಾಹಿನಿ, ಕೋಲಾರ: ನಗರ ಹೊರವಲಯದ ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿನ ಸೋಮಣ್ಣ ಎಂಬುವರಿಗೆ ಸೇರಿದ ಮಳಿಗೆಯಲ್ಲಿ ಭಾನುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು ಒಂದು ಲಕ್ಷ ರೂ. ಮೌಲ್ಯದ ಸಾವಿರಕ್ಕೂ ಹೆಚ್ಚು ಟೊಮೋಟೊ ಕ್ರೇಟ್‌ಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಅದೃಷ್ಟವಶ ಯಾರಿಗೂ ಪ್ರಾಣಪಾಯವಾಗಲಿಲ್ಲ ಟೊಮೋಟೊ ಮಂಡಿಗೆ ಬಿದ್ದಿದ್ದ ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಉಂಟಾಯಿತು. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
