ಉದಯವಾಹಿನಿ, ಬೆಂಗಳೂರು: ಮುಂಬರುವ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ,1 ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಬಿಜೆಪಿ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿದೆ.
ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ನಿಕಟಪೂರ್ವ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ್‌, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್‌ ಕುಮಾರ್‌ ಸುರಾಣ ಭಾಗವಹಿಸಿದ್ದರು.
ಸಭೆಯಲ್ಲಿ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ತೀರ್ಮಾನಿಸಲಾಗಿದ್ದು, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ಬದ್ದರಾಗಬೇಕೆಂಬ ಒಮತದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರವನ್ನು ಎನ್‌ಡಿಎ ಮೈತ್ರಿ ಪಕ್ಷವಾದ ಜೆಡಿಎಸ್‌‍ಗೆ ಬಿಟ್ಟುಕೊಡುವುದು ಇಲ್ಲವೇ ಈ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವರ್‌ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಹಾವೇರಿ ಜಿಲ್ಲೆ ಶಿಗ್ಗಾವಿಗೆ ಅವರ ಪುತ್ರ ಭರತ್‌ ಬೊಮಾಯಿ ಇಲ್ಲವೇ ಮಾಜಿ ಸಚಿವ ಮುರುಗೇಶ್‌ ನಿರಾಣಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!