ಉದಯವಾಹಿನಿ, ಬೆಂಗಳೂರು: ನೈರುತ್ಯ ಮುಂಗಾರು ಮತ್ತೆ ಕಳೆದ ಎರಡು ದಿನಗಳಿಂದ ಚೇತರಿಕೆಯಾಗಿದ್ದು, ಕರಾವಳಿಯಲ್ಲಿ ವ್ಯಾಪಕವಾಗಿ ಉಳಿದಂತೆ ರಾಜ್ಯದ ಒಳನಾಡಿದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಉತ್ತಮ ಮಳೆಯಾಗಿದೆ.
ಒಂದೆರಡು ಕಡೆ ಭಾರಿ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಹಗುರದಿಂದ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
