ಉದಯವಾಹಿನಿ, ಮಹರಾಷ್ಟ್ರ: ಪರತವಾಡ ಧರಣಿ ರಸ್ತೆಯ ಸೇಮದೋಹ್ ಬಳಿ ಖಾಸಗಿ ಬಸ್ 30 ಅಡಿ ಆಳದ ಕಾಲುವೆಗೆ ಬಿದ್ದು, 50- 55 ಮಂದಿ ಪ್ರಯಾಣಿಕರಲ್ಲಿ 4 ಜನ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ವೇಳೆ ಬಸ್‌ನಲ್ಲಿ 50-55 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಉಳಿದವರು ಗಾಯಗಳೊಂದಿಗೆ ಬದುಕುಳಿದರು.ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
