ಉದಯವಾಹಿನಿ, ಬೆಂಗಳೂರು: ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ಇದೇ ೨೭ರಂದು ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ವೈಭವದಿಂದ ಆಚರಿಸಲಾಗುತ್ತಿದೆ. ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ, ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ರಾಜ್ಯಸಭಾ ಸದಸ್ಯ, ಚಿತ್ರನಟ ಜಗ್ಗೇಶ್ ಮಹೋತ್ಸವ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಸಂದೇಶದ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಶುಭ ಕೋರಿದ್ದಾರೆ ಎಂದರು.
ಆಡಳಿತ ಕ್ಷೇತ್ರದಲ್ಲಿ ಭಾರತೀಯ ಸಮಾಚಾರ ಸೇವೆ ಅಧಿಕಾರಿ ಸುಹಾಸ್ ರಾಮಚಂದ್ರಚಾರ್, ಕೆ.ಎ.ಎಸ್ ಅಧಿಕಾರಿ ಆರ್. ಉಮಾದೇವಿ, ರಾಜಕೀಯದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾ ಪೌರ ರಾಮಪ್ಪ ಬಡಿಗೇರ್, ಚಲನಚಿತ್ರದಲ್ಲಿ ಚಲನಚಿತ್ರ ಕಲಾವಿದೆ ವೀಣಾ ಸುಂದರ್, ಸಮುದಾಯ ಸೇವಾ ಕ್ಷೇತ್ರದಲ್ಲಿ ಬಿ.ಎನ್.ವಿ. ರಾಜಶೇಖರ್ ಅವರಿಗೆ ವಿಶ್ವಕರ್ಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ವಿಶ್ವಕರ್ಮ ಸೇವಾ ರತ್ನ ಪ್ರಶಸ್ತಿಗೆ ಮಾಧ್ಯಮ ಕ್ಷೇತ್ರದಲ್ಲಿ ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಸಂಗೀತ ಕ್ಷೇತ್ರದಲ್ಲಿ ರಾಜೇಶ್ ಕೃಷ್ಣನ್ ಸೇರಿದಂರೆ ಇತರ ಸಾಧಕರಿಗೆ ವಿಶ್ವಕರ್ಮ ಭಾವಚಿತ್ರದ ಸ್ಮರಣಿಕೆ, ಫಲಕ ನೀಡಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!