ಉದಯವಾಹಿನಿ, ಬೆಂಗಳೂರು: ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್ನಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವುದಾಗಿ ಪ್ರಿಯಾಂಕ್ ಖರ್ಗೆ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಪುನರುಚ್ಚರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸಚಿವರಾಗಿ ಸೇರ್ಪಡೆಗೊಂಡ ಪ್ರಿಯಾಂಕ್ ಖರ್ಗೆ ಅವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ.ಈ ಕುರಿತು ಟ್ವೀಟ್ ಮಾಡಿರುವ ಖರ್ಗೆ, ‘ಬಿಜೆಪಿಗರು, ಪದೇ ಪದೇ, ಆರ್ಎಸ್‌ಎಸ್ ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ.ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ’ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!