ಉದಯವಾಹಿನಿ, ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 12 ವಿವಿಧ ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಕೇಶ್ವಾಪೂರದ ರೇಷ್ಮಾ ಗುಡಗೇರಿ, ಗದಗಿನ ಆಸ್ಮಾಬಾನು ಬಾಗವಾನ್ ಉರ್ಪ್ ಮುಲ್ಲಾ, ರಾಮನಗರದ ರವಿ ಉರ್ಪ್ ನೀಲೆಶ್ ಬಣಸೋಡೆ, ಗದಗಿನ ಮುಬಾರಕ್ ಬಾಗವಾನ್, ಹುಬ್ಬಳ್ಳಿ ಕೆಕೆ ನಗರದ ದಸ್ತಗೀರ್ ಧಾರವಾಡ ಎಂಬವರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಆರೋಪಿಗಳ ವಿರುದ್ಧ ಜಿಲ್ಲೆಯಲ್ಲದೇ ವಿವಿಧ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದ್ದು, ಸದ್ಯ ವಿದ್ಯಾನಗರ ಪೆÇಲೀಸ್ ಠಾಣೆಯಲ್ಲಿ 7 ಕೇಶ್ವಾಪೂರ ಠಾಣೆಯಲ್ಲಿ 3, ಹುಬ್ಬಳ್ಳಿ ಉಪನಗರ ಹಾಗೂ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಆರೋಪಿತರಿಂದ ಸುಮಾರು 6 ಲಕ್ಷ ರೂ ಮೌಲ್ಯದ 10 ವಿವಿಧ ಕಂಪನಿಯ ಸ್ಕೂಟಿಗಳು ಹಾಗೂ 2 ಬೈಕ್ ವಶಪಡಿಸಿಕೊಳ್ಳಲಾಗಿದೆ. ನಗರದಲ್ಲಿ ದಾಖಲಾದ ಪ್ರಕರಣಗಳನ್ನು ಪತ್ತೆ ಮಾಡುವ ಸಂದರ್ಭದಲ್ಲಿ ಸಿಸಿ ಟಿವಿ ಕ್ಯಾಮರಾ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಮಹಿಳೆಯರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಮಹಿಳೆಯ ಮೂಲಕ ಆರೋಪಿತರು ಬೈಕ್ ಕಳ್ಳತನ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದರು. ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಶಿವಪ್ರಕಾಶ್ ನಾಯಕ್, ವಿದ್ಯಾನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಂತ ಗೌಳಿ, ಪಿಎಸ್‍ಐ ಶ್ರೀಮಂತ ಹುಣಸಿಕಟ್ಟಿ, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಇದ್ದರು.

 

Leave a Reply

Your email address will not be published. Required fields are marked *

error: Content is protected !!