ಉದಯವಾಹಿನಿ, ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಅವಕಾಶ ನೀಡುವಂತೆ ಆಗ್ರಹಿಸಿ ಮಹಿಷ ದಸರಾ ಆಚರಣೆ ಸಮಿತಿಯಿಂದ ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ಮೈಸೂರಿನ ಟೌನ್ ಹಾಲ್ ಬಳಿ ನಡೆದಿದೆ.ಮಹಿಷ ದಸರಾ ಆಚರಣೆಗೆ ಮುಂದಾದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಟೌನ್ ಹಾಲ್ ಆವರಣದಲ್ಲಿ ಮಹಿಷ ದಸರಾ ಆಚರಣಾ ಸಮಿತಿ, ಮೊದಲು ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ನಡೆಸಿದ್ದು, ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೊರಬಂದ ಸಮಿತಿ ಸದಸ್ಯರು ಏಕಾಏಕಿ ಪ್ರತಿಭಟನೆ ಆರಂಭಿಸಿದ್ದಾರೆ.ನಮಗೆ ಚಾಮುಂಡಿ ಬೆಟ್ಟದಲ್ಲಿ ಮಹಿಷ ಮೂರ್ತಿಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು, ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಲಾರಂಭಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!