ಉದಯವಾಹಿನಿ, ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನು ಫಲಾನುಭವಿಗಳ ಕೈಸೇರಿಲ್ಲ. ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತೆ ಎಂದು ಕಾಯುತ್ತಿರುವುವವರಿಗೆ ಶೀಘ್ರವೇ ಎಂದು ಹೇಳಿದ್ದಾರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. ಆದರೆ ಯಾವಾಗ ಎಂದು ಹೇಳಿಲ್ಲ. ಹಾಗೆ ಎರಡು ತಿಂಗಳ ದುಡ್ಡು ಒಟ್ಟಿಗೆ ಬರುತ್ತದೆ ಎಂದು ನಿರೀಕ್ಷಿಸಿದ್ದ ಮಹಿಳೆಯರಿಗೆ ಸಚಿವೆ ಇಲ್ಲ ಎಂದು ಹೇಳಿದ್ದಾರೆ.
