ಉದಯವಾಹಿನಿ, ಗದಗ : ಮಂಡ್ಯದಲ್ಲಿ ಡಿಸೆಂಬರ್ ನಲ್ಲಿ ಜರುಗಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು, ಗದಗ ನಗರಕ್ಕೆ ಆಗಮಿಸಿತು. ನಗರದ ಚನ್ನಮ್ಮಾ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಜಿಲ್ಲಾಡಳಿತ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಕನ್ನಡ ಪರ ಸಂಘಟನೆ ಬರಮಾಡಿಕೊಂಡು ತಾಯಿ ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿದರು.

ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರ ಅವರು ಮಾತನಾಡಿ, ಡಿಸೆಂಬರ 21, 22, 23 ರಂದು 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಜರುಗಲಿದೆ. ನಾವೆಲ್ಲರೂ ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸೋಣ. ಕನ್ನಡ ಭಾಷೆ ಬೆಳೆಸುವಲ್ಲಿ ಪ್ರತಿಯೊಬ್ಬರು ಕಂಕಣ ಬದ್ದರಾಗಿ ನಿಲ್ಲಬೇಕು, ಕನ್ನಡ ನಾಡು ಉಳಿಸಿ ಬೆಳೆಸುವ ಇಂತಹ ಕಾರ್ಯಕ್ರಮವು ಎಲ್ಲರಲ್ಲೂ ಸಂತೋಷ ಉಂಟು ಮಾಡಿದೆ ಎಂದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದ ಪಾಟೀಲ, ಜಿಲ್ಲಾ ಹೆಚ್ಚುವರಿ ಪೆÇೀಲಿಸ್ ವರಿಷ್ಠಾಧಿಕಾರಿ ಎಂ. ಬಿ. ಸಂಕದ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕ ಅಧಿಕಾರಿ ಬಸವರಾಜ ಬಳ್ಳಾರಿ ಸೇರಿದಂತೆ ಮತ್ತಿತರು ಹಾಜರಿದ್ದು, ಕನ್ನಡ ರಥವನ್ನು ಸ್ವಾಗತಿಸಿ ಪುಷ್ಪಾರ್ಚನೆ ಮಾಡಿದರು.
ರಥವು ಮಂಡ್ಯ ಜಿಲ್ಲೆಯ ವಿಶೇಷತೆ ಸಾರುವ ರಥ ಕನ್ನಡ ನುಡಿ ಕಲಿಸುವ ತಾಯಿ ಭುವನೇಶ್ವರಿ, ಕಾವೇರಿ ಮಾತೆ, ಉಳುಮೆ ಮಾಡಲು ಸಿದ್ಧವಿರುವ ಎತ್ತುಗಳು ಮತ್ತು ರೈತ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ. ವಿಶ್ವೇಶ್ವರಯ್ಯ ಸುಂದರ ಆಕೃತಿಗಳು ಜಿಲ್ಲೆಯ ಬಗ್ಗೆ ಚಿತ್ರಣ, ಜ್ಞಾನ ಪೀಠ ಪುರಸ್ಕೃತರ ಬಾವಚಿತ್ರಗಳು ರಥದಲ್ಲಿ ವಿಶೇಷತೆ ಹೊಂದಿತ್ತು. ಈ ವೇಳೆ ವಿವಿಧ ಕನ್ನಡ ಪರ ಸಂಘಟನೆ, ಹಾಗೂ ಕನ್ನಡಾಬಿಮಾನಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!