ಉದಯವಾಹಿನಿ,ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಅ.4ಕ್ಕೆ ಮುಂದೂಡಿದೆ.ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಅವಕಾಶ ಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.
ಇದನ್ನು ಮನ್ನಿಸಿದ ನ್ಯಾಯಾಲಯ ಮುಂದಿನ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿತು. ಇದರಿಂದಾಗಿ ದರ್ಶನ್ ಅಲ್ಲಿಯವರೆಗೂ ಬಳ್ಳಾರಿ ಜೈಲೇ ಗಟ್ಟಿ.ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ತನಿಖೆ ಮುಗಿದ ಹಿನ್ನಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈಗಾಗಲೇ ವಿಶೇಷ ಸಾರ್ವಜನಿಕ ಅಭಿಯೋಜಕ ಪ್ರಸನ್ನ ಅವರು, ಆಕ್ಷೇಪಣೆ ಸಲ್ಲಿಸಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ.ನಾಗೇಶ್ ಪರ ವಕೀಲರು ವಾದ ಮಂಡಿಸಿದ ನಂತರ ನ್ಯಾಯಾಲಯ ನೀಡುವ ತೀರ್ಪು ದರ್ಶನ್ ಜಾಮೀನು ಭವಿಷ್ಯವನ್ನು ನಿರ್ಧರಿಸುತ್ತದೆ.

Leave a Reply

Your email address will not be published. Required fields are marked *

error: Content is protected !!