ಉದಯವಾಹಿನಿ, ಔರಾದ್ : ಮಕ್ಕಳನ್ನು , ಅಕ್ಷರಜ್ಞಾನ ನೀಡುವ ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ಎರಡನೇ ತಾಯಿಯ ರೂಪದಲ್ಲಿ ಕೆಲಸ ಮಾಡುತ್ತವೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂತಪೂರ ವತಿಯಿಂದ ಔರಾದ ಪಟ್ಟಣದ ಡಾ.ಗುರುಪಾದಪ್ಪಾ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜರುಗಿದ ಪೆÇೀಷಣ ಅಭಿಯಾನ ಮಾಸಾಚರಣೆಯ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಸಂಸ್ಕಾರದ ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಅತ್ಯಂತ ಜವಾಬ್ದಾರಿಯುತವಾದದ್ದು. ಸರ್ಕಾರವು ಮಹಿಳೆಯರು ಮತ್ತು ಮಕ್ಕಳಿಗಾಗಿ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳ ಮುಖಾಂತರ ವಿತರಿಸುವುದರಿಂದ ಈ ಸೌಲಭ್ಯಗಳು ಎಲ್ಲ ಫಲಾನುಭವಿಗಳಿಗೆ ಪ್ರಮಾಣಿಕವಾಗಿ ತಲುಪಿಸಬೇಕು ಎಂದರು.
