ಉದಯವಾಹಿನಿ, ಅಥಣಿ : ಸರಕಾರದಿಂದ ನೀಡುವ ಅನುದಾನದೊಂದಿಗೆ ಫಲಾನುಭವಿ ಕುಟುಂಬದವರು ಕೂಡಾ ಸ್ವಲ್ಪ ಶ್ರಮ ವಹಿಸಿ ಉತ್ತಮ ಮನೆ ನಿರ್ಮಿಸಿಕೊಳ್ಳಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು
ಅವರು ತಾಲೂಕಿನ ನಂದಗಾಂವ. ಘಟನಟ್ಟಿ ಗ್ರಾಮ ಪಂಚಾಯಿತಿ ವತಿಯಿಂದ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾದ ಮನೆಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು.
ಗ್ರಾಮ ಪಂಚಾಯಿತಿಯಿಂದ ಬಡ ಜನರಿಗೆ ಮನೆ ನಿರ್ಮಿಸಿಕೊಳ್ಳಲು ಸರಕಾರದಿಂದ ಅನುದಾನ ನೀಡಲಾಗುತ್ತದೆ. ಪಂಚಾಯಿತಿಯವರು ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಬೇಕು ಫಲಾನುಭವಿಗಳು ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಎಂಎಫ್ ಮಾಜಿ ಜಿಲ್ಲಾ ಅಧ್ಯಕ್ಷ ಬಾಬು ಗಲಗಲಿ, ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಶೈಲ ಕಾಂಬಳೆ, ರೈತ ಮುಖಂಡ ಸಿಎಸ್ ನೇಮಗೌಡ, ತಾಲೂಕಾ ಪಂಚಾಯತ್ ಅಧಿಕಾರಿ ಶಿವಾನಂದ ಕಲ್ಲಾಪುರ. ಪಿಡಿಓ ಸುಭಾಸ್ ಹುಬ್ಬಳ್ಳಿ. ಕುಮಾರ ಗಲಗಲಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.
