
ಉದಯವಾಹಿನಿ, ರಾಮನಗರ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರ ಬಳಿಕ ರಾಮನಗರ ಜಿಲ್ಲೆಯವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ನಾವು ದನಿ ಎತ್ತುತ್ತೇವೆ’ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.
ತಾಲ್ಲೂಕಿನ ಕೂಟಗಲ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ‘ಉಪ ಮುಖ್ಯಮಂತ್ರಿ ಡಿ.ಕೆ.
ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತರುವ ಜೊತೆಗೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡುತ್ತಿದ್ದಾರೆ. ಹಾಗಾಗಿ, ಸಿದ್ದರಾಮಯ್ಯ ಬಳಿಕ ನಮ್ಮ ಜಿಲ್ಲೆಗೆ ಸಿ.ಎಂ ಸ್ಥಾನ ಸಿಗಬೇಕು ಎಂಬುದು ನನ್ನ ಆಸೆಯಾಗಿದೆ’ ಎಂದರು.ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಮ್ಮ ಯೋಗ್ಯತೆ ಮತ್ತು ಘನತೆ ಬಗ್ಗೆ ಅರಿವಿಲ್ಲ. ಪ್ರತಿ ವಿಷಯಕ್ಕೂ ಡಿ.ಕೆ. ಶಿವಕುಮಾರ್ ಅವರನ್ನು ಎಳೆದು ತಂದು ಒಕ್ಕಲಿಗ ಸಮುದಾಯದ ನಾಯಕರಾಗಲು ಹೊರಟಿದ್ದಾರೆ. ಮೊದಲು ಅವರು ಚಿಲ್ಲರೆಯಾಗಿ ಮಾತನಾಡುವುದನ್ನು ಬಿಡಬೇಕು’ ಎಂದು ಹೇಳಿದರು.
